ಸ್ಥಾನ

ರಾಷ್ಟ್ರೀಯ ಜಂಟಿ ಕಾರ್ಯದರ್ಶಿ, ಆಮ್ ಆದ್ಮಿ ಪಾರ್ಟಿ
ರಾಜ್ಯ ಕಾರ್ಯದರ್ಶಿ, ಆಮ್ ಆದ್ಮಿ ಪಾರ್ಟಿ ಕರ್ನಾಟಕ

ವ್ಯಕ್ತಿಚಿತ್ರ

ಪ್ರಸ್ತುತ ಆಮ್ ಆದ್ಮಿ ಪಾರ್ಟಿ ಕರ್ನಾಟಕದ ರಾಜ್ಯ ಕಾರ್ಯದರ್ಶಿಯಾಗಿ ಹಾಗೂ ಆಮ್ ಆದ್ಮಿ ಪಾರ್ಟಿಯ ರಾಷ್ಟ್ರೀಯ ಜಂಟಿ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

2012ರಲ್ಲಿ ಆಮ್ ಆದ್ಮಿ ಪಾರ್ಟಿ ಸೇರಿದ ಸಂಚಿತ್ ಅವರು ಪುಲಕೇಶಿನಗರ ವಿಧಾನಸಭಾ ಕ್ಷೇತ್ರದ ಸಂಯೋಜಕರಾಗಿ ಕೆಲ ಕಾಲ ಕೆಲಸ ಮಾಡಿದ್ದರು.
ರಾಷ್ಟ್ರೀಯ ಮಟ್ಟದ ಬಿಲಿಯರ್ಡ್ಸ್ ಆಟಗಾರರಾಗಿರುವ ಇವರು, ಹಲವಾರು ಚಾಂಪಿಯನ್ಷಿಪ್ಗಳಲ್ಲಿ ಭಾಗವಹಿಸಿದ್ದಾರೆ. ರಾಜ್ಯ ಮಟ್ಟದ ಜಾವೆಲಿನ್ ಥ್ರೋ ಚಾಂಪಿಯನ್ಷಿಪ್ಗಳಲ್ಲಿಯೂ ಭಾಗವಹಿಸಿದ್ದಾರೆ.

ಮೊದಲಿನಿಂದಲೂ ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡಿದ್ದ ಸಂಚಿತ್ ಅವರು ಸ್ಲಂನಲ್ಲಿರುವ ಮಕ್ಕಳಿಗೆ ಶಿಕ್ಷಣ, ಊಟವಿಲ್ಲದ ಬಡಜನರಿಗೆ ಊಟ ಒದಗಿಸುವ ಸೇವೆಯಲ್ಲಿ ನಿರತರಾಗಿದ್ದರು. ಸೋಲ್ (SOUL) ಎಂಬ ಸಂಸ್ಥೆಯ ಮುಖೇನ ಈಗಲೂ ಅಂತಹ ನಿಸ್ವಾರ್ಥ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ.

MONK on BIKE ಸಂಸ್ಥೆಯ ಮುಖೇನ ಸಾಮಾಜಿಕ ವಿಷಯಗಳ ಕುರಿತು, ಟ್ರಾಫಿಕ್ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಬೈಕ್ ರೇಸ್ ಗಳನ್ನು ನಡೆಸಿದ್ದಾರೆ. ಬೆಂಗಳೂರಿನ ವಿಬ್ಗಯಾರ್ ಇಂಟರ್ನ್ಯಾಷನ್ಲ್ ಸ್ಕೂಲ್ನಲ್ಲಿ ಬಾಲಕಿ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ಖಂಡಿಸಿ ಹೋರಾಟ ಮಾಡಿದ್ದಾರೆ.

ಶಿಕ್ಷಣ

ಬಿಷಪ್ ಕಾಟನ್ ಶಾಲೆಯಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಪಡೆದ ಸಂಚಿತ್ ಅವರು ಕ್ರೈಸ್ಟ್ ಕಾಲೇಜಿನಲ್ಲಿ ಪದವಿ ಪೂರ್ವ ಶಿಕ್ಷಣ ಪಡೆದಿದ್ದಾರೆ. ಬೆಂಗಳೂರಿನ ಪ್ರತಿಷ್ಠಿತ IHMCT&AN ನಲ್ಲಿ ಹೋಟೆಲ್ ಮ್ಯಾನೇಜ್ಮೆಂಟ್ ನಲ್ಲಿ ಪದವಿ ಗಳಿಸಿದ್ದಾರೆ

Join hands to make an impact

Contact Us

top